
ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯತ್ ಪಿಡಿಒ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ.
ಅನಧಿಕೃತವಾಗಿ ಉತಾರ್ ನೀಡಿದ ಕಾರಣಕ್ಕೆ ಪಿಡಿಒ ಮೇಲೆ ಹಲ್ಲೆ ನಡೆಸಲಾಗಿದೆ. ಮಾಡಮಗೇರಿ ಗ್ರಾಮ ಪಂಚಾಯತ್ ಪಿಡಿಒ ಜಯಗೌಡ ಪಾಟೀಲ್ ಹಲ್ಲೆಗೊಳಗಾದ ಪಿಡಿಒ. ಗಂಭೀರವಾಗಿ ಹಲ್ಲೆಗೊಳಗಾಗಿರುವ ಜಯಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.