

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಆರೋಗ್ಯ ವಿಚಾರಿಸಿ, ಶೀಘ್ರ ಪಕ್ಷ ಹಾಗೂ ಜನರ ಸೇವೆ ಮರಳುವಂತಾಗಲಿ ಎಂದು ಹಾರೈಸಿದರು.
ಇದೇ ವೇಳೆ, ನವೆಂಬರ್ 19ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆಸಲು ಉದ್ದೇಶಿಸಿರುವ ಅಂಗನವಾಡಿಯ ಸುವರ್ಣ ಮಹೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಕುರಿತು ಸಚಿವರು ಖರ್ಗೆ ಅವರಿಗೆ ಮಾಹಿತಿ ನೀಡಿದರು.