Belagavi NewsBelgaum NewsKannada NewsKarnataka NewsLatest
*ಬೆಳಗಾವಿ: ಪತಿಯ ಮೇಲೆ ಕಾದ ಎಣ್ಣೆ ಸುರಿದ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಪತಿಯ ಮೇಲೆ ಪತ್ನಿ ಕಾದ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಭಾಷ್ ಪಾಟೀಲ್ (55) ಮೇಲೆ ಪತ್ನಿ ವೈಶಾಲಿ ಕಾದ ಎಣ್ಣೆ ಸುರಿದಿದ್ದಾಳೆ. ಸುಭಾಷ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಭಾಷ್ ಸಿಲಿಂಡರ್ ವಿತರಣೆ ಕೆಲಸ ಮಾಡುತ್ತಿದ್ದರು. ಪತ್ನಿ ವೈಶಾಲಿಗೆ ಪತಿ ಮೇಲೆ ಅನುಮಾನ. ಪತಿ ಬೇರೆ ಮಹಿಳೆ ಜೊತೆ ಅನಿಅತಿಕ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಮನೆಗೆ ಬಂದ ಪತಿ ಮೇಳೆ ಬಿಸಿ ಎಣ್ಣೆ ಸುರಿದಿದ್ದಾಳೆ. ಗಾಯಾಳು ಸುಭಾಷ್ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.