
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆ-ಕಾಲೇಜುಗಳಿಗೆ ಅಕ್ಟೋಬರ್ 18ರವರೆಗೆ ದಸರಾ ರಜೆ ವಿಸ್ತರಿಸಲಾಗಿದೆ.
ದಸರಾ ರಜೆ ವಿಸ್ತರಣೆಯಿಂದಾಗಿ ಮಕ್ಕಳು, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ವಿಶೇಷ ತರಗತಿಗಳನ್ನು ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಜೆಯ ದಿನಗಳನ್ನು ಸರಿದೂಗಿಸಲು ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಂಡು ಪಠ್ಯಗಳನ್ನು ಮುಗಿಸಲಿದ್ದಾರೆ. ಯಾವುದೇ ಮಕ್ಕಳಿಗೂ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗದಂತೆ ಸ್ಪೆಷಲ್ ಕ್ಲಾಸ್ ನಡೆಸಲಾಗುವುದು ಎಂದು ಹೇಳಿದರು.