HealthKannada NewsLatestNational

*ಕೆಮ್ಮಿನ ಸಿರಪ್ ಸೇವಿಸಿದ್ದ ಮತ್ತೆ 6 ಮಕ್ಕಳು ಸಾವು*

ಪ್ರಗತಿವಾಹಿನಿ ಸುದ್ದಿ: ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಕೆಮ್ಮಿನ ಸಿರಪ್ ಸೇವಿಸಿದ್ದ 14 ಮಕ್ಕಳು ಈಗಾಗಲೇ ಸಾವನ್ನಪ್ಪಿದ್ದರು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೆ 6 ಮಕ್ಕಳು ಮೃತಪಟ್ಟಿದ್ದಾರೆ. ಕೆಮ್ಮಿನ ಸಿರಪ್ ಸೇವಿಸಿದ್ದ 6 ಮಕ್ಕಳಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ 6 ಮಕ್ಕಳೂ ಸಾವನ್ನಪ್ಪಿದ್ದಾರೆ.

ಹಲವು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ಸಿರಪ್ ಸೇವಿಸಿ ಅಸ್ವಸ್ಥರಾಗಿರುವ ಮಕ್ಕಳ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ. ತಮಿಳುನಾಡಿನಲ್ಲಿರುವ ಔಷಧ ತಯಾರಿಕಾ ಕಂಪನಿಗೆ ನೋಟಿಸ್ ನೀಡಲಾಗಿದೆ. ಪಂಜಾಬ್ ಸರ್ಕಾರ ಕೂಡ ಕೆಮ್ಮಿನ ಸಿರಪ್ ನಿಷೇಧ ಮಾಡಿದೆ.

Home add -Advt

Related Articles

Back to top button