
ಪ್ರಗತಿವಾಹಿನಿ ಸುದ್ದಿ: ಮಲಯಾಳಂ ಚಿತ್ರರಂಗದ ಖ್ಯಾತ ನಟರಾದ ಮಮ್ಮುಟ್ಟಿ, ಅವರ ಪುತ್ರ ದುಲ್ಕರ್ ಸಲ್ಮಾನ್ ಹಾಗೂ ಪೃಥ್ವಿರಾಜ್ ಸುಕುಮಾರನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಾಹನ ಕಳ್ಳ ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾಣೆ ಕೇಸ್ ನಲ್ಲಿ ಇಡಿ ಅಧಿಕಾರಿಗಳು ಸ್ಟಾರ್ ನಟರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಕೇರಳ ಹಾಗೂ ತಮಿಳುನಾಡಿನಲ್ಲಿ ನಟರಿಗೆ ಸೇರಿದ ಮನೆಗಳು ಹಾಗೂ ಇತರೆ 17 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.
ದುಲ್ಕರ್ ಸಲ್ಮಾನ್ ತಮ್ಮ ಲ್ಯಾಂಡ್ ರೋವರ್ ಡಿಫೆಂಡರ್ ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಇದೀಗ ಇಡಿ ದಾಳಿ ನಡೆದಿದೆ.