Kannada NewsKarnataka NewsLatest

*ಸರ್ಕಾರದಿಂದ ‘ನೀರಿದ್ದರೆ ನಾಳೆ’ ಯೋಜನೆ: ನಟ ವಸಿಷ್ಠ ಸಿಂಹ ರಾಯಭಾರಿ*

ಪ್ರಗತಿವಾಹಿನಿ ಸುದ್ದಿ: ಅಂತರ್ಜಲ ಅತಿಹೆಚ್ಚು ಬಳಕೆಯ ಪಟ್ಟಿಯಲ್ಲಿರುವ ರಾಜ್ಯದ 252 ಗ್ರಾಮ ಪಂಚಾಯಿತಿಗಳಲ್ಲಿ ನೀರಿದ್ದರೆ ನಾಳೆ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿದೆ.

ಈ ಮಹತ್ವಾಅಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ ನೀರಿದ್ದರೆ ನಾಳೆ ಎನ್ನುವ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು ರಾಜ್ಯದ ಜಲ ಸಂಪನ್ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸಬಹುದು ಎಣ್ದರು.

ನೀರಿದ್ದರೆ ನಾಳೆ ಈ ಯೋಜನೆಗೆ ಖ್ಯಾತ ನಟ ವಸಿಷ್ಠ ಸಿಂಹ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ನಾಳೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

Home add -Advt

ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲೂಕುಗಳ 252 ಅಂತರ್ಜಲ ಅತಿಬಳಕೆ ಗ್ರಾಮಪಂಚಾಯಿತಿಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ತರಲಾಗುವುದು. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯಿತಿಗಳಿವೆ ಎಂದರು.

Related Articles

Back to top button