
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ವಸತಿ ನಿಲಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಮಹಾದೇವಪ್ಪ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಈಗಾಗಲೇ ವಿದ್ಯಾಭ್ಯಾಸ ಪೂರೈಸಿರುವ ಹಳೆಯ ವಿದ್ಯಾರ್ಥಿಗಳು ಹಾಗೂ ಹೊರ ವಿದ್ಯಾರ್ಥಿಗಳು ಸೇರಿದಂತೆ ಹಲವರು ನೆಲೆಸಿದ್ದಾರೆ. ಇದರಿಂದ ಅರ್ಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಚಿವ ಎಚ್.ಸಿ.ಮಹದೇವಪ್ಪ ಅವರು, ಹಾಸ್ಟೆಲ್‌ಗಳಲ್ಲಿ ಅನಧಿಕೃತ ವಾಸವನ್ನು ತಡೆಯಲು ಕ್ರಮ ವಹಿಸಿರುವುದಾಗಿ ಹೇಳಿದ್ದಾರೆ.
ಇನ್ನು ಮುಂದೆ ಕಾಲೇಜುಗಳಲ್ಲಿ ಶಿಕ್ಷಣ ಪಡೆಯದೇ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅನಧಿಕೃತವಾಗಿ ವಾಸಿಸುವಂತಹ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ವಹಿಸಲು ಸೂಚಿಸಲಾಗಿದ್ದು ಯಾವುದೇ ವಿದ್ಯಾರ್ಥಿ ನಿಲಯದಲ್ಲಿ ಈ ರೀತಿಯ ಅನಧಿಕೃತ ಪ್ರವೇಶ ಆಗಿದ್ದರೆ ಈ ಬಗ್ಗೆ ಹಾಸ್ಟೆಲ್‌ನ ವಿದ್ಯಾರ್ಥಿಗಳು ಅಧಿಕಾರಿಗಳ ಗಮನಕ್ಕೆ ತರಬೇಕು ಅಥವಾ ತಾವುಗಳು ನಮ್ಮ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ +91 94823 00400ಕ್ಕೆ ಸಹ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಅವರು ಹೇಳಿದ್ದಾರೆ.