Kannada NewsKarnataka NewsLatest
*BREAKING: ಕೋರ್ಟ್ ಕಟ್ಟಡದ ಮೇಲಿಂದ ಜಿಗಿದು ಪೋಕ್ಸೋ ಕೇಸ್ ಆರೋಪಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಕೇಸ್ ಆರೋಪಿ ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆದಿದೆ.
ಆರೋಪಿಯನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಏಕಾಏಕಿ ಕೋರ್ಟ್ ನ 5ನೇ ಮಹಡಿಗೆ ತೆರಳಿದ ಆರೋಪಿ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಕಟ್ಟಡದಿಂದ ಹಾರಿದ್ದಾನೆ.
ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭಿರವಾಗಿ ಗಾಯಗೊಂಡಿದ್ದ ಆರೋಪಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.