Election NewsKannada NewsKarnataka NewsNationalPolitics
*ಸಚಿವ ಸಂಪುಟ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ: ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವುದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಬಗ್ಗೆ ಕೇಳಿದಾಗ, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದು ತಿಳಿಸಿದರು.