*ದಸರಾದಲ್ಲಿ ಬಲೂನು ಮಾರಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಮೇಲೆ ಮೇಲೆ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಪ್ರಪ್ರಾಪ್ತ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಮಾಡಿ, ಕೊಲೆ ಮಾಡಿ ಎಸ್ಕೆಪ್ ಆಗಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಬಲೂನ್ ಮಾರಲು ಬಂದಿದ್ದ ಬಾಲಕಿ ಕುಟುಂಬಸ್ಥರ ಜೊತೆ ಟೆಂಟ್ ನಲ್ಲಿ ಮಲಗಿದ್ದಳು ಆದರೆ ಈ ಬಗ್ಗೆ ತಿಳಿದ ಕಾರ್ತಿಕ್, ಟೆಂಟ್ ನಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದಾನೆ.
ಸಿಸಿಟಿವಿ ಪರಿಶೀಲಿಸಿ ತನಿಖೆ ಆರಂಭಿಸಿದ ಪೊಲೀಸರಿಗೆ ಕಾರ್ತಿಕ್ ಈ ಕೃತ್ಯ ಎಸೆಗಿರುವುದು ಗೊತ್ತಾಗಿದೆ. ಬಳಿಕ ಆತ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ.
ಪೊಲೀಸರು ಕೊಳ್ಳೇಗಾಲಕ್ಕೆ ಬಂಧಿಸಲು ತೆರಳಿದ ವೇಳೆ ಆರೋಪಿ ಕಾರ್ತಿಕ್ ಕಾನ್ಸ್ ಸ್ಟೇಬಲ್ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದಾನೆ. ಕೂಡಲೇ ಎಚ್ಚೆತ್ತ ಸಬ್ ಇನ್ಸ್‌ಪೆಕ್ಟರ್ ಜೈಕೀರ್ತಿ ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್, ಹಿಂದೆ ಮಂಡ್ಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಅಷ್ಟೇ ಅಲ್ಲದೆ ಈ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ