
ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡ (92) ಅವರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆಯ ವೈದ್ಯರು ಬಿಗ್ ಅಪ್ಡೇಟ್ ನೀಡಿದ್ದಾರೆ.
ಜ್ವರ ಮತ್ತು ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಆರೋಗ್ಯ ಸುಧಾರಿಸಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಅವರು “ಸ್ಥಿರ ಹಾಗೂ ಹರ್ಷದಿಂದ” ಇದ್ದಾರೆ. ಅವರು ಚೇತರಿಸಿಕೊಂಡಿದ್ದು, ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ. ವಾರ್ಡ್‌ನಲ್ಲಿ ಅವರ ಆರೋಗ್ಯದ ಮೇಲ್ವಿಚಾರಣೆ ಮುಂದುವರೆಯುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಗಳ ಅಧ್ಯಕ್ಷ ಡಾ. ಎಚ್. ಸುದರ್ಶನ್ ಬಲ್ಲಾಳ್ ಅವರು ತಿಳಿಸಿದ್ದಾರೆ.