*BREAKING: ಬಾಲಕಿ ಮೇಲೆ ಅತ್ಯಾಚಾರವೆಸಗಿ, 19 ಬಾರಿ ಚಾಕು ಇರಿದು ಕೊಂದ ಕಾಮುಕ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ 10 ವರ್ಷದ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಆರೋಪಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರೋಣತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಬಾಲಕಿ ಮೇಲೆ ಅತ್ಯಾಚಾರವೆಸಗಿ, 19 ಬಾರಿ ಚಾಕುವಿನಿಂದ ಇರಿದು ಆರೋಪಿ ಕೊಲೆಗೈದಿದ್ದಾನೆ. ಕುಡಿದ ಮತ್ತಿನಲ್ಲಿ ಆರೋಪಿ ಈ ನೀಚಕೃತ್ಯವೆಸಗಿರುವುದು ದೃಢವಾಗಿದೆ.
ಘಟನೆ ಸಂಬಂಧ ಈಗಾಗಲೇ ಪೊಲೀಸರು ಆರೋಪಿ ಕಾರ್ತಿಕ್ ನನ್ನು ಬಂಧಿಸಿದ್ದಾರೆ. ಈತ ಈಗಾಗಲೇ ಅಪರಾಧ ಪ್ರಕರಣದಲ್ಲಿ ಜೈಲು ಸೇರಿ ನಾಲ್ಕು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ. ಮನೆಗೆ ಹೋಗದೇ ಊರೂರು ಅಲೆದಾಡುತ್ತಾ, ಕುಡಿದು ಓಡಾಡುತ್ತಾ ಮತ್ತೆ ಅಪರಾಧ ಕೃತ್ಯಗಳನ್ನು ಮಾಡುತ್ತಿರುವುದು ತನಿಖೆಯಿಂದ ಗೊತ್ತಾಗಿದೆ.
ದಸರಾ ಹಿನ್ನೆಲೆಯಲ್ಲಿ ಬಾಲಕಿ ಹಾಗೂ ತಂದೆ-ತಾಯಿ ಬಲೂನು ಮಾರಲೆಂದು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದರು. ರಾತ್ರಿ ಟೆಂಟ್ ನಲ್ಲಿ ಮಲಗಿದ್ದ ಬಾಅಲಕಿಯನ್ನು ಹೊತ್ತೊಯ್ದ ದುರುಳ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾನೆ.