
ಪ್ರಗತಿವಾಹಿನಿ ಸುದ್ದಿ: 40 ಅಡಿ ಆಳದ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದಿದ್ದ 10 ವರ್ಷದ ಬೆಕ್ಕು ಅನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾ ನಗರ ಬಡಾವಣೆಯಲ್ಲಿ ನಡೆದಿದೆ.
ಪಟ್ಟಣದ ನಿವಾಸಿ ರಿಷಿ ಭಾಗಚಾಂದನಿ ಎಂಬುವವರು ಸಾಕಿದ ಬೆಕ್ಕು ಬಾವಿಯಲ್ಲಿ ಬಿದ್ದ ಕುರಿತು ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಸುಮಾರು 1 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಕ್ಕನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.