
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೈಕ್ಲೋನ್ ಎಫೆಕ್ಟ್ ನಿಂದಾಗಿ ಇಂದು ಮತ್ತು ನಾಳೆ 12 ಜಿಲ್ಲೆಗಳಿಗೆ ಭಾರಿ ಮಳೆ ಆಗುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಮೈಸೂರು, ಮಂಡ್ಯ ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬೆಂಗಳೂರು ನಗರ- ಗ್ರಾ, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಭಾರಿ ಮಳೆ ಸಾಧ್ಯತೆ ಇರುವುದರಿಂದ ಭಾನುವಾರ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಇನ್ನು ಮಳೆ ಸದ್ಯಕ್ಕೆ ಬಿಡುವು ನೀಡುವ ಲಕ್ಷಣ ಇಲ್ಲ. ಅ. 14ರವರೆಗೆ ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಇತರೆಡೆ ಮಳೆ ಹೆಚ್ಚಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಶಿವಮೊಗ್ಗ ಮೈಸೂರು, ಮಂಡ್ಯ ಕೊಡಗು, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 13 ರ ವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.