Kannada NewsNationalPolitics

*ಯೋಗಿ ಅವರನ್ನು ಶ್ಲಾಘಿಸಿದ ಸಮಾಜವಾದಿ ಪಕ್ಷದ ಶಾಸಕಿ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದ ಸಮಾಜವಾದಿ ಪಕ್ಷದ ಶಾಸಕಿ ಪೂಜಾ ಪಾಲ್ ಅವರನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ತಮ್ಮ ಪತಿ ರಾಜು ಪಾಲ್ ಹತ್ಯೆ ಅಪರಾಧಿಗಳಿಗೆ ಶಿಕ್ಷೆ ವಿಧಿಸಿದ್ದಕ್ಕಾಗಿ  ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಪೂಜಾ ಪಾಲ್ ಹೋಗಳಿದ್ದರು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಿದ್ದಕ್ಕಾಗಿ ಯೋಗಿ ಆದಿತ್ಯನಾಥ್ ಅವರನ್ನು ಪೂಜಾ ಪಾಲ್ ವಿಧಾನಸಭೆ ಅಧಿವೇಶನದಲ್ಲಿ ಹೊಗಳಿದ್ದರು, ಅತಿಕ್ ಅಹ್ಮದ್‌ನಂತಹ ಅಪರಾಧಿಗಳನ್ನು ನಿರ್ಮೂಲನೆ ಮಾಡುವ ಮೂಲಕ ನನ್ನಂತ ಮಹಿಳೆಯರಿಗೆ ನ್ಯಾಯ ಒದಗಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ್ದಾರೆ.

ನನ್ನ ಗಂಡನನ್ನು ಕೊಂದವರು ಯಾರು ಎಂದು ಎಲ್ಲರಿಗೂ ತಿಳಿದಿದೆ. ಬೇರೆ ಯಾರೂ ನನಗೆ ಸಹಾಯ ಮಾಡದಿದ್ದಾಗ ಮುಖ್ಯಮಂತ್ರಿ ನನಗೆ ನ್ಯಾಯ ನೀಡಿದ್ದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಶೂನ್ಯ ಸಹಿಷ್ಣುತೆಯಂತಹ ನೀತಿಗಳ ಮೂಲಕ ಪ್ರಯಾಗ್‌ರಾಜ್‌ನಲ್ಲಿ ಅನೇಕ ಮಹಿಳೆಯರಿಗೆ ಮುಖ್ಯಮಂತ್ರಿ ನ್ಯಾಯ ನೀಡಿದ್ದಾರೆ, ಇದು ಅತಿಕ್ ಅಹ್ಮದ್‌ನಂತಹ ಅಪರಾಧಿಗಳನ್ನು ನಿರ್ಮೂಲನೆ ಮಾಡಲು ಕಾರಣವಾಯಿತು ಎಂದು ಅವರು ಹೇಳಿದ್ದರು.

Home add -Advt

Related Articles

Back to top button