Karnataka NewsLatest

*ಸಮೀಕ್ಷೆ ನಡೆಸುತ್ತಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಯಶೋಧಾ ಹೃದಯಾಘಾತಕ್ಕೊಳಗಾದ ಶಿಕ್ಷಕಿ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಕ್ಷಕಿಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಪರೇಷನ್ ಮಾಡಿ ಶಿಕ್ಷಕಿಗೆ ಸ್ಟಂಟ್ ಅಳವಡಿಸಲಾಗಿದೆ. ಸಮೀಕ್ಷಾ ಕಾರ್ಯದ ಒತ್ತಡದಿಂದ ಹೃದಯಾಘಾತವಾಗಿದೆ ಎನ್ನಲಾಗಿದೆ.

Home add -Advt

Related Articles

Back to top button