Kannada NewsKarnataka NewsPolitics
*ಆರ್‌ಎಸ್‌ಎಸ್ ಸಂಘಟನೆಯನ್ನು ತಾಲಿಬಾನಿಗಳಿಗೆ ಹೊಲಿಸಿದ ಬಿ.ಕೆ. ಹರಿಪ್ರಸಾದ್*

ಪ್ರಗತಿವಾಹಿನಿ ಸುದ್ದಿ: ಆರ್‌ಎಸ್‌ಎಸ್ ಸಂಘಟನೆ ಕರ್ನಾಟಕ ರಾಜ್ಯದಾದ್ಯಂತ ನಿರಂತರವಾಗಿ ತನ್ನ ಶಾಖೆಗಳನ್ನು ನಡೆಸುತ್ತಿದೆ. ಆದರೆ ಸರ್ಕಾರಿ ಜಾಗಗಳಲ್ಲಿ ಈ ಕಾರ್ಯಕ್ರಮಗಳನ್ನು ನಡೆಸಲು ಯಾವುದೇ ಅನುಮತಿ ಪಡೆಯದೆ ಬಳಸುತ್ತಿರುವುದು ಸಂಪೂರ್ಣ ಕಾನೂನು ಉಲ್ಲಂಘನೆ ಆಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಆರ್‌ಎಸ್‌ಎಸ್ ಒಂದು ರೀತಿ ಭಾರತ ದೇಶದ ತಾಲಿಬಾನಿಗಳು, ಇದುವರೆಗೂ ತಮ್ಮ ಸಂಘಟನೆಯನ್ನು ನೋಂದಾಯಿಸದ ಸಂಘಟನೆ ಆರ್.ಎಸ್.ಎಸ್. ಹೀಗೆ ನೋಂದಣಿಯೇ ಆಗದೆ ಹಲವು ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನೆರೆ ರಾಜ್ಯ ತಮಿಳುನಾಡಿನಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ, ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಲು ಮುಂದಾದ ಆರ್‌ಎಸ್‌ಎಸ್ ಸದಸ್ಯರ ಮೇಲೆ ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅವರನ್ನು ಬಂಧಿಸಿ ಕೇಸ್‌ಗಳನ್ನೂ ದಾಖಲಿಸಲಾಗಿದೆ. ಇದೇ ರೀತಿ ಕರ್ನಾಟಕದಲ್ಲಿಯೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.