Kannada NewsKarnataka NewsLatestPolitics
*ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ಶಾಸಕ ಆರ್. ವಿ.ದೇಶಪಾಂಡೆ ಅಸಮಾಧಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕರೇ ಅಪಸ್ವರ ಎತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ವೇಗ ತಗ್ಗಿದೆ ಎಂದು ಶಾಸಕ ಆರ್.ಅವಿ.ದೇಶಪಾಂಡೆ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದ ಶಾಸಕ ಆರ್.ವಿ.ದೇಶಪಾಂಡೆ, ನಾನು ಸಿಎಂ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿರಲಿಲ್ಲ. ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕ ಹೊರೆಯಾಗಿದೆ. ಜನರಿಗೆ ಅನುಕೂಲವಾಗಿರುವುದು ಒಂಡೆಡೆಯಾದರೆ ಮತ್ತೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನು ರಚಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿ ವೇಗ ಕುಂಟಿತವಾಗಿದೆ ಎಂದು ಹೇಳಿದರು.