
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಯುವತಿಯೊಬ್ಬಳಿಗೆ ಡ್ರಾಪ್ ಕೊಡುವುದಾಗಿ ಹೇಳಿ ಕರೆದೊಯ್ದ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟಬೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಜಿಲ್ಲೆಯ ಮಂಚೇನಹಳ್ಳಿಗೆ ಹೋಗುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಯುವತಿ ಕೆಲಸ ಹುಡುಕಿಕೊಂಡು ಚಿಕ್ಕಬಳ್ಳಾಪುರ ನಗರಕ್ಕೆ ಬಂದಿದ್ದಳು. ಬಳಿಕ ವಾಪಸ್ ನಡೆದು ಊರಿಗೆ ಹೋಗುತ್ತಿದ್ದಾಗ ಪರಿಚಯದವನೇ ಆದ ವ್ಯಕ್ತಿಯೋರ್ವ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ ಗೆ ಯುವತಿಯನ್ನು ಹತ್ತಿಸಿಕೊಂಡಿದ್ದಾನೆ. ಬಳಿಕ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಲ್ಲಿಯೇ ಯುವತಿಯನ್ನು ಬಿಟ್ಟು ಬಂದ ಕಾಮುಕ ಚಿಕ್ಕಬಳ್ಳಾಪುರ ನಗರಕ್ಕೆ ಬಂದು ತನ್ನ ಸ್ನೇಹಿತನನ್ನು ಕರೆದೊಯ್ದು ಅದೇ ನಿರ್ಜನ ಪ್ರದೇಶದಲ್ಲಿ ಇಬ್ಬರೂ ಸೇರಿ ಮತ್ತೆ ಅತ್ಯಾಚಾರವೆಸಗಿದ್ದಾರೆ. ಬಳಿಕ ಯುವತಿ ಕಿವಿಯಲ್ಲಿದ್ದ ಬಂಗಾರದ ಓಲೆ ಕಿತ್ತುಕೊಂಡು ಯುವತಿಯನ್ನು ಪೆಟ್ರೋಲ್ ಬಂಕ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ.
ಪೆಟ್ರೋಲ್ ಬಂಕ್ ಬಳಿ ಯುವತಿ ಕುಳಿತಿದ್ದ ಸ್ಥಿತಿ ಕಂಡು ಸ್ಥಳೀಯರು ಸಹಾಯಕ್ಕೆ ಬಂದಿದ್ದು, ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತ್ಯಾಚಾರ ಪ್ರಕರಣ ಸಂಅಬ್ಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಬಳ್ಳಪೌರ ಮೂಲದ ಸಿಕಿಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದೆ.