*ನಾನು ಹಾಗೆ ಹೇಳಿಯೇ ಇಲ್ಲ; ನನ್ನ ಮಾತು ತಪ್ಪಾಗಿ ಅಥೈಸಲಾಗಿದೆ ಎಂದ ಆರ್.ವಿ ದೇಶಪಾಂಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ವಿವರಣೆ ಕೇಳುತ್ತಿದ್ದಂತೆ ಎಚ್ಚತ್ತ ಶಾಸಕರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ನಾನು ಆ ರೀತಿ ಹೇಳಿಕೆ ನೀಡಿಲ್ಲ. ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಸಮಜಾಯಿಷಿ ನೀಡಿದ್ದಾರೆ.
ದಾಂಡೇಲಿಯಲ್ಲಿ ನಡೆದ ಸಭೆಯಲ್ಲಿ ನಾನು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿಲ್ಲ. ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದೇನೆ. ಸಿಎಂ ಸಿದ್ದರಾಮಯ್ಯ ಬಡವರಿಗಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರು ಓರ್ವ ಅನುಭವ ಸಂಪನ್ನ ನಾಯಕರಾಗಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದು ಸಿದ್ದರಾಮಯ್ಯನವರ ಶಕ್ತಿ ಎಂದಿದ್ದೇನೆ. ನನ್ನ ಮಾತಿನ ಉದ್ದೇಶ ಗ್ಯಾರಂಟಿ ಯೋಜನೆಗಳ ವಿರುದ್ಧವಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟವಾಗಿದೆ ಎಂದು ನಾನು ಹೇಳಿಯೇ ಇಲ್ಲ. ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದು ವಿಷಾದನೀಯ ಎಂದು ಸ್ಪಷ್ಟನೆ ನೀಡಿದ್ದಾರೆ.