
ಪ್ರಗತಿವಾಹಿನಿ ಸುದ್ದಿ: ಸಬ್ ಇನ್ಸ್ ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ನಡೆಸಿದ್ದ ಪಿಎಸ್ ಐ ರಾಜಶೇಖರ್ ರಾಠೋಡ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆ ಪಿಎಸ್ ಐ ರಾಜಶೇಖರ್ ರಾಠೋಡ್ ಸಸ್ಪೆಂಡ್ ಆದವರು. ಯಾದಗಿರಿ ಎಸ್ ಪಿ ಪೃಥ್ವಿಕ್ ಶಂಕರ್ ಅಮಾನತು ಆದೇಶ ಹೊರಡಿಸಿದ್ದಾರೆ.
ಪಿಎಸ್ ಐ ರಾಜಶೇಖರ್ ರಾಠೋಡ್, ನಾರಾಯಣಪುರ ರೌಡಿಶೀಟರ್ ನಾಗರಾಜ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ನಡೆಸಿದ್ದರು. ಈ ಫೋಟೋ, ವಿಡಿಯೋಗಳು ಭಾರಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಪಿಎಸ್ ಐ ರಾಜಶೇಖರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.