Belagavi NewsBelgaum NewsKannada NewsKarnataka NewsNationalPolitics

*ನಾನು ಸಿಎಂ ರೇಸ್‌ನಿಂದ ಹಿಂದೆ ಸರಿದಿದ್ದೇನೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: 2028 ರ ಚುನಾವಣೆಯಲ್ಲಿ ನಾನು ಸಿಎಂ ಅಭ್ಯರ್ಥಿ ಎಂದು ಹೇಳುತ್ತಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು, ನಾನು ಸಿಎಂ ರೇಸ್ ನಿಂದೆ ಹಿಂದೆ ಸರಿದಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ರೇಸ್‌ನಿಂದ ಹಿಂದೆ ಸರಿದಿದ್ದೇನೆ. ಹಿಂದೆ ಸರಿದು ಒಂದು ವರ್ಷವೇ ಆಗೋಗಿದೆ ಎಂದು ನಗುತ್ತಾ ಉತ್ತರ ನೀಡಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂಬುದು ಬರೀ ಚರ್ಚೆ ಅಷ್ಟೇ. ಒಳಗಡೆ ಏನೂ ಆಗಲ್ಲ. ಇದು ಬರೀ ಮಾಧ್ಯಮಗಳಲ್ಲಿ ಪ್ರಚಾರ ಆಗುತ್ತಿದೆ. ಇದನ್ನು ನೋಡಿಕೊಂಡು ಕೆಲವರು ಹೇಳುತ್ತಾರೆ. ನಮ್ಮ ಪಕ್ಷದಲ್ಲಿ ಈ ವಿಷಯಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

Home add -Advt

Related Articles

Back to top button