*ಭಾರತ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಒಪ್ಪಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್*

ಪ್ರಗತಿವಾಹಿನಿ ಸುದ್ದಿ: ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸುತ್ತಾ ಅಮೇರಿಕ ಬಂದಿದೆ. ಆದರೆ ಮೋದಿಯವರು ತೈಲ ಖರೀದಿ ನಿಲ್ಲಿಸುವುದಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.
ಟ್ರಂಪ್ ಅವರ ಹೇಳಿಕೆ ಬಹಳ ಅನುಮಾನಕ್ಕೆ ಕಾರಣವಾಗಿದೆ. ಆದರೂ ಭಾರತ ಈ ಬಗ್ಗೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.
ಭಾರತ ರಷ್ಯಾದಿಂದ ತೈಲ ಖರೀದಿಸುವುದು ನನಗೆ ಇಷ್ಟವಿರಲಿಲ್ಲ. ಹೀಗಾಗಿ ನಾವು ಭಾರತದ ಸರಕುಗಳ ಮೇಲೆ ಅಪಾರ ಪ್ರಮಾಣದ ಸುಂಕವನ್ನು ವಿಧಿಸಿದ್ದೇವೆ. ಈಗ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಅವರು ನನಗೆ ಭರವಸೆ ನೀಡಿದ್ದಾರೆ. ಭಾರತದ ಈ ಕ್ರಮ ರಷ್ಯಾವನ್ನು ಆರ್ಥಿಕವಾಗಿ ಪ್ರತ್ಯೇಕಿಸುವ ಪ್ರಯತ್ನದಲ್ಲಿ ದೊಡ್ಡ ಹೆಜ್ಜೆಯಾಗಲಿದೆ ಎಂದು ಅವರು ಹೇಳಿದರು.
ಭಾರತ ಈ ಮೂಲಕ ಒಂದು ದೊಡ್ಡ ಹೆಜ್ಜೆಯೆಡೆಗೆ ಮುಂದುವರಿಯಲು ಪ್ರಾರಂಭಿಸಲಿದೆ. ಇದರೊಂದಿಗೆ ಚೀನಾ ಕೂಡಾ ಇದೇ ರೀತಿಯ ಮಾರ್ಗವನ್ನು ಆರಿಸುವಂತೆ ನಾವು ಪ್ರಯತ್ನ ಪಡಲಿದ್ದೇವೆ ಎಂದು ಅಮೇರಿಕಾದ ಶ್ವೇತ ಭವನದಲ್ಲಿ ಮಾಧ್ಯಮಗಳ ಮುಂದೆ ಅವರು ಹೇಳಿಕೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ಅಂತಹ ದೊಡ್ಡ ನಿರ್ಧಾರವನ್ನು ನಿಜವಾಗಿಯೂ ಮಾಡಿದ್ದಾರೆಯೇ ಎಂಬ ಬಗ್ಗೆ ಕೇಳಲಾದ ಇ-ಮೇಲ್ ಪ್ರಶ್ನೆಗಳಿಗೆ ವಾಷಿಂಗ್ಟನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಲ್ಲಿಯವರೆಗೆ ಪ್ರತಿಕ್ರಿಯಿಸಿಲ್ಲ.