Kannada NewsKarnataka NewsLatest

*ಕನೇರಿ ಮಠದ ಕಾಡಸಿದ್ದೇಶ್ವರ ಸಾಮೀಜಿಗೆ ವಿಜಯಪುರ ಪ್ರವೇಶಕ್ಕೆ ನಿರ್ಬಂಧ*

ವಿಜಯಪುರ: ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸಾಮೀಜಿ ಅವರಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಆನಂದ್ ಆದೇಶ ಹೊರದಿಸಿದ್ದಾರೆ.

ಲಿಂಗಾಯಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ಅವಹೇಳನ ಮತ್ತು ಧರ್ಮದ ಹೆಸರಲ್ಲಿ ವಿಭಜನೆ ಮಾಡುವ ಅಸಂವಿಧಾನಿಕ ಭಾಷೆ ಬಳಕೆ ಆರೋಪದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಎರಡು ತಿಂಗಳ ಕಾಲ ವಿಜಯಪುರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಆದೇಶದ ಪ್ರಕಾರ ಇಂದಿನಿಂದ ಡಿಸೆಂಬರ್ 14ರವರೆಗೆ ಸ್ವಾಮೀಜಿ ವಿಜಯಪುರ ಜಿಲ್ಲೆಗೆ ಭೇಟಿ ನೀಡುವಂತಿಲ್ಲ. ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಕೆಲ ಲಿಂಗಾಯಿತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

Home add -Advt


Related Articles

Back to top button