Kannada NewsKarnataka NewsLatest
*ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಕೊಯ್ದು ವಿದ್ಯಾರ್ಥಿನಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿಯ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು ಕೊಲೆ ಮಾಡಿರುವ ಪ್ರಕರಣ ಸಂಅಬ್ಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಶ್ರೀರಾಂಪುರ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯಾಹ್ನ ಯಾಮಿನಿ ಪ್ರಿಯಾ ಎಂಬ 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರೀತಿ ನಿರಾಕರಿಸಿದ್ದಕ್ಕಾಗಿ ಪಾಗಲ್ ಪ್ರೇಮಿ ವಿಗ್ನೇಶ್ ಎಂಬಾತ ಯಾಮಿನಿಯನ್ನು ಹತ್ಯೆಗೈದು ಪರಾರಿಯಾಗಿದ್ದ.
ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದ ಶ್ರೀರಾಂಪುರ ಪೊಲೀಸರು ನಿನ್ನೆ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದ್ದರು. ಬೈಕ್ ನಲ್ಲಿ ಎಸ್ಕೇಪ್ ಆಗಿದ್ದ ಆರೋಪಿ ವಿಗ್ನೇಶ್ ಗೆ ಆತನ ಸ್ನೇಹಿತ ಹರೀಶ್ ಕೂಡ ಸಾಥ್ ನೀಡಿದ್ದ.
ಇಂದು ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯ ಮನೆಯೊಂದರಲ್ಲಿ ಅಡಗಿಕುಳಿತಿದ್ದ ವಿಘ್ನೇಶ್ ನನ್ನು ಹಾಗೂ ಆತನ ಸ್ನೇಹಿತ ಹರೀಶ್ ಇಬ್ಬರನ್ನೂ ಬಂಧಿಸಿದ್ದಾರೆ.