Kannada NewsKarnataka NewsLatestPolitics

*ಆರ್.ಎಸ್.ಎಸ್ ಕಚೇರಿ ಮುತ್ತಿಗೆ ಯತ್ನ: ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆ ನಡೆಸುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು ಆರ್.ಎಸ್.ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಕೋಟಿಲಿಂಗೇಶ್ವರ ನಗರದಲ್ಲಿರುವ ಆರ್.ಎಸ್.ಎಸ್ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಮುನ್ನುಗ್ಗಿದ ಘಟನೆ ನಡೆದಿದೆ. ಯುವಕ ಕಾಂಗ್ರೆಸ್ ಕಾರ್ಯಕರ್ತರು ಆರ್.ಎಸ್.ಎಸ್ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಂತೆಯೇ ಗೋಕುಲ್ ರಸ್ತೆಯಲ್ಲಿಯೇ ಪೊಲೀಸರು ತಡೆದಿದ್ದಾರೆ.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರನ್ನು ತಡೆದ ಪೊಲೀಸರು 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Home add -Advt

Related Articles

Back to top button