Belagavi NewsBelgaum NewsKannada NewsKarnataka News
*ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಒಂದೆಡೆ ಮತದಾನ ನಡೆಯುತ್ತಿದ್ದರೆ ಮತ್ತೊಂದೆಡೆ ಜಾರಕಿಹೊಳಿ ಹಾಗೂ ಸವದಿ ಬಣಗಳ ನಡುವೆ ಹೊಡೆದಾಟ ನಡೆದಿದೆ.
ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಆರೋಪಿಸಿ ಸವದಿ ಬಣದ ಬೆಂಬಲಿಗರು ಕ್ಯಾತೆ ತೆಗೆದಿದ್ದು, ಜಾರಕಿಹೊಳಿ ಬಣದ ಅಭ್ಯರ್ಥಿ ವಿರುದ್ಧ ಆರೋಪ ಮಾಡಿ ಗಲಾಟೆ ಆರಂಭಿಸಿದ್ದಾರೆ. ಜಾರಕಿಹೊಳಿ ಪೆನಲ್ ಅಭ್ಯರ್ಥಿ ಮತದಾನಕ್ಕೆ 40 ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಸವದಿ ಬಣ ಆರೋಪಿಸಿದೆ. ಇದೇ ವಿಚಾರವಾಗಿ ಎರಡೂ ಬಣಗಳ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ.
ಗಲಾಟೆ ತಾರಕ್ಕೇರುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಮತದಾನದ ವೇಳೆ ಹೈಡ್ರಾಮ ನಡೆದಿದೆ.