Belagavi NewsBelgaum NewsKannada NewsKarnataka NewsNationalPolitics

*ವಾಲ್ಮೀಕಿ ಸಮುದಾಯಕ್ಕೆ ನಿಂದಿಸಿದ ಆರೋಪ: ರಮೇಶ ಕತ್ತಿ ಮೇಲೆ ಬಿತ್ತು ಕೇಸ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ ಎಂದು ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.

ಮತದಾನ ಮುಗಿದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ವೇಳೆ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದನ್ನು ಆಧಾರವಾಗಿಟ್ಟುಕೊಂಡು ಸಮಾಜದ ಮುಖಂಡ ರಾಜಶೇಖರ ತಳವಾರ ಕ್ಯಾಂಪ್‌ ಠಾಣೆಗೆ ದೂರು ನೀಡಿದ್ದಾರೆ.

Home add -Advt

Related Articles

Back to top button