Belagavi NewsBelgaum NewsKannada NewsKarnataka NewsPolitics
*ರಮೇಶ್ ಕತ್ತಿ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನದ ವೇಳೆ ವಾಲ್ಮೀಕಿ ಸಮಾಜದ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ ಅವಹೇಳನ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನೆ ನಡೆಸಲಾಯಿತು.
ಮಾಜಿ ಸಂಸದ ರಮೇಶ್ ಕತ್ತಿ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ಬೆಳಗಾವಿ ಕ್ಯಾಂಪ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದಿಂದ ಹೋರಾಟ ಮಾಡಲಾಯಿತು.
ಈ ವೇಳೆ ರಾಜ್ಯಾಧ್ಯಕ್ಷ ಮಹೇಶ್ ಎಸ್ ಶೀಗಿಹಳ್ಳಿ, ಬೆಳಗಾವಿ ಜಿಲ್ಲಾ ಗೌರವ ಅಧ್ಯಕ್ಷ ರಾಮ ಪೂಜಾರಿ, ಬೆಳಗಾವಿ ತಾಲೂಕು ಅಧ್ಯಕ್ಷ ಮಂಗೇಶ್ ಚನ್ನಿಕುಪ್ಪಿ, ಬೆಳಗಾವಿ ತಾಲೂಕು ಉಪಾದ್ಯಕ್ಷ ಮುತ್ತುರಾಜ್ ಹೊಸಗಟ್ಟಿ, ಬೆಳಗಾವಿ ನಗರ ಅಧ್ಯಕ್ಷ ಮಂಜು ತಳವಾರ್, ಬೆಳಗಾವಿ ನಗರ ಪ್ರಧಾನ ಕಾರ್ಯದರ್ಶಿ ಸಾಗರ್ ಹೊಸಗಟ್ಟಿ, ಆದರ್ಶ ದನದಮಣಿ ಹಾಗೂ ಹಲವು ಯುವ ನಾಯಕರು ಉಪಸ್ಥಿತರಿದ್ದರು.