
ಪ್ರಗತಿವಾಹಿನಿ ಸುದ್ದಿ: ಎರಡು ಬೈಕ್ ಗಳು ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವರಾಜ್ ಎಂಬ ಸ್ನೇಹಿತನ ಜೊತೆ ಅನು ಹಾಗೂ ಛಾಯಾ ಎಂಬುವವರು ಬೆಂಗಳೂರ್ನಿಂದ ಹಾಸನಾಂಬೆ ದರ್ಶನಕ್ಕೆ ಬಂದಿದ್ದರು. ದೇವರ ದರ್ಶನ ಪಡೆದು ಮೂವರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಇನ್ನೋವಾ ಕಾರು ಆಕ್ಟೀವಾ ನಡುವೆ ಡಿಕ್ಕಿಯಾಗಿದೆ. ಇದೇ ವೇಳೆ ಬಂದ ಬೈಕ್ ಕೂಡ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬಸವರಾಜ್ ಹಾಗೂ ಅನು (19) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಛಾಯಾ (20) ಸ್ಥಿತಿ ಗಂಭೀರವಾಗಿದ್ದು, ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.