Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗಲು: ಮಹಿಳೆಯರು, ಮಕ್ಕಳು ಸೇರಿ 11 ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 11 ಜನರು ಅಸ್ವಸ್ಥರಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಅಶೋಕ ಜನಮನ-2025 ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಆಗಮಿಸಿ ಉದ್ಘಾಟನೆ ನೆರವೇರಿಸಿದ್ದಾರೆ. ಈ ವೇಳೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿದೆ.

ಕ್ರೀಡಾಂಗಣ ಸಾಮರ್ಥ್ಯಕ್ಕಿಂತಲೂ ನಿರೀಕ್ಷೆಗೆ ಮೀರಿ ಜನರು ಸೇರಿದ್ದರು. ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಂತೆ ಕ್ರೀಡಾಂಗಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಕುಡಿಯಲು ನೀರು ಸಿಗದಏ ಹಲವರು ಪರದಾಡಿದ್ದಾರೆ. ಉಸಿರುಕಟ್ಟಿದ ಸ್ಥಿತಿಯಿಂದಾಗಿ 11 ಜನರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Home add -Advt

Related Articles

Back to top button