
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ನವಿಮುಂಬೈನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಜೀವದಹನಗೊಂಡಿದ್ದಾರೆ. 10 ಜನರು ಗಾಯಗೊಂಡಿದ್ದಾರೆ.
ವಾಶಿ ಪ್ರದೇಶದ ಸೆಕ್ಟರ್ ೧೪ರಲ್ಲಿ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್ ನ 10ನೇ ಫ್ಲೋರ್ ನಲ್ಲಿರುವ ಫ್ಲಾಟ್ ನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ 11 ಹಾಗೂ 12ನೇ ಮಹಡಿಗೂ ವ್ಯಾಅಪಿಸಿದೆ.
ಬೆಂಕಿ ದುರಂತದಲ್ಲಿ ಇಬ್ಬರು ಮಹಿಳೆಯರು, ಓರ್ವ ಪುರುಷ ಹಾಗೂ 6 ವರ್ಷದ ಬಾಲಕಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ. 8 ಅಗ್ನಿಶಾಮಕದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ.
ಬೆಂಕಿ ಅವಘಡಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.