Kannada NewsKarnataka NewsLatest

*ಬಲಿಪಾಡ್ಯಮಿ: ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯ ಗೋಪೂಜೆಗೆ ಸೂಚನೆ*

ಬೆಂಗಳೂರು: ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೂಪೂಜೆ ಮಾಡುವಂತೆ ಧಾರ್ಮಿಕ ದತ್ತಿ ಇಲಾಖೆ, ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

Home add -Advt

ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ನಿರ್ದೇಶನ ನೀಡಿದ್ದಾರೆ.

ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ವಿಶೇಷ ಸ್ಥಾನಮಾನ ನೀಡಿ ಪೂಜಿಸಲಾಗುತ್ತದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದು ಬಲಿಪಾಡ್ಯಮಿಯಂದು ಗೋವುಗಳಿಗೆ ಸ್ನಾನ ಮಾಡಿಸಿ, ಅರಿಷಿಣ-ಕುಂಕುಮ ಹಾಗೂ ಹೂಗಳಿಂದ ಅಲಂಕರಿಸಿ, ಪೂಜಿಸಿ, ಅಕ್ಕಿ-ಬೆಲ್ಲ, ಹಣ್ಣು ಮುಂತಾದವುಗಳ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆಯನ್ನು ಯಶಸ್ವಿಗೊಳಿಸಿ ಎಂದು ಸೂಚಿಸಲಾಗಿದೆ.

Related Articles

Back to top button