Kannada NewsKarnataka NewsLatest

*ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 10 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ ಹಾಗೂ ಮಲೆನಾಡೀನ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗಲಿದೆ. ದಕ್ಷಿಣ ಹಾಗೂ ಒತ್ತರ ಒಳನಾಡಿನಲ್ಲಿಯೂ ಮಳೆ ಅಬ್ಬರಿಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಕೊಡಗು ಜಿಲ್ಲೆಗಳ್ಲಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಬೀದರ್, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮಳೆಯೊಂದಿಗೆ ಗಾಳಿಯ ವೇಗವು ಗಂಟೆಗೆ 35-45 ಕಿ.ಮೀ ವೇಗದಲ್ಲಿ ಬೀಸಲಿದೆ. ಪ್ರವಾಸಿಗರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.


Related Articles

Back to top button