Kannada NewsKarnataka NewsLatest

*ಅ.29 ರವರಗೂ ರಾಜ್ಯಾದ್ಯಂತ ಇರಲಿದೆ ಮಳೆ ಅಬ್ಬರ*

ಪ್ರಗತಿವಾಹಿನಿ ಸುದ್ದಿ: ಅ.29 ರವರಗೂ ರಾಜ್ಯಾದ್ಯಂತ ಮಳೆ ಅಬ್ಬರಿಸಲಿದ್ದಾ‌ನೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹಲವು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.‌

ಬಂಗಾಳ ಸಾಗರ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಮೇಲೆ ಇದರ ಪರಿಣಾಮ ಹೆಚ್ಚಲಿದೆ. ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

Home add -Advt

ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಶಿವಮೊಗ್ಗ ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಹಾವೇರಿ, ಬಳ್ಳಾರಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಕಲಬುರಗಿ, ಗದಗ, ಧಾರವಾಡ ಮತ್ತು ಬೀದರ್ ನಲ್ಲಿ ಭಾರೀ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.

Related Articles

Back to top button