
ಪ್ರಗತಿವಾಹಿನಿ ಸುದ್ದಿ: ಶೃಂಗೇರಿ ಶಾಖಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ಇಂದು ಇಹಲೋಕ ತ್ಯಜಿಸಿದ್ದಾರೆ.
ಅವರಿಗೆ 75 ವರ್ಷ ವಯಸ್ಸಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತಿ ಸ್ವಾಮೀಜಿ ಬಹು ಅಂಗಾಂಗ ವೈಫಕ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮಠದ ಮೂಲಗಳು ತಿಳಿಸಿವೆ.




