
ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಗೆ ಮನೆಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.
ಜವರಮ್ಮ (೬೩) ಮೃತ ಮಹಿಳೆ. ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಶಾಸಕ ಎ.ಮಂಜು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.




