Kannada NewsKarnataka NewsNational

*ಬಸ್ ದುರಂತದಲ್ಲಿ ಸುಟ್ಟು ಹೋದ ಕುಟುಂಬ*

ಪ್ರಗತಿವಾಹಿನಿ ಸುದ್ದಿ: ಆಂದ್ರಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಬಸ್ ದುರಂತದಲ್ಲಿ  20 ಪ್ರಯಾಣಿಕರು ಸಜೀವ ದಹನವಾಗಿದ್ದು ಒಂದು ಕಡೆಯಾದರೆ ಈ ಘಟನೆಯಲ್ಲಿ ನೆಲ್ಲೂರು ಜಿಲ್ಲೆಯ ಮಿಂಜಾಮುರ್​ ಮಂಡಲದ ಗೊಲ್ಲವರಿಪಲ್ಲಿಯ ಒಂದೇ ಕುಟುಂಬದ ನಾಲ್ವರು ಕೂಡಾ ಸಾವನ್ನಪ್ಪಿದ್ದಾರೆ. 

ವಿಂಜಾಮೂರ್ ಮಂಡಲದ ಗೊಲ್ಲವರಿಪಳ್ಳಿಯ ಗೊಲ್ಲ ರಮೇಶ್ (35), ಅನುಷಾ (30), ಮಾನ್ವಿತಾ (10) ಮತ್ತು ಮನೀಶ್ (12) ಸಾವನ್ನಪ್ಪಿದವರು.

Home add -Advt

ರಮೇಶ್ ಕಳೆದ 15 ವರ್ಷಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಕಂಪನಿಯ ಪ್ರವಾಸದ ಭಾಗವಾಗಿ ಕುಟುಂಬ ಸದಸ್ಯರೊಂದಿಗೆ ಹೈದರಾಬಾದ್‌ಗೆ ಬಂದಿದ್ದರು. ಹಿಂದಿರುಗುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

Related Articles

Back to top button