
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಅಬ್ಬರ ಜೋರಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬೆಂಗಳೂರಿನಲ್ಲಿಯೂ ವರುಣಾರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ೨೭ರಂದು ಭಾರಿ ಮಳೆಯಾಗಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟವಾದ ಮೋಡಕವಿದ ವಾತವಾರಣ ಮುಂದುವರೆದಿದೆ. ಅಲ್ಲಲ್ಲಿ ಮಳೆಯಾಗಲಿದೆ. ಅಕ್ಟೋಬರ್ 24ರಿಂದ ನವೆಂಬರ್ 2ರವರೆಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ ಹಾಗೂ ಕೆಲವೊಮ್ಮೆ ಸಾಧಾರಣ ಮಳೆಯಾಗಲಿದೆ. ಅಕ್ಟೀಬರ್ 28ರಂದು ಅಲ್ಲಲ್ಲಿ ಭಾರಿ ಮಲೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.




