
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ವೃದ್ಧೆ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಕೆ.ಆರ್.ಪುರಂನ ತ್ರಿವೇಣಿನಗರದಲ್ಲಿ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಭೀಕರತೆಗೆ ಅಕ್ಕ-ಪಕ್ಕದ ಎರಡು ಮೂರು ಮನೆಗಳು ಹಾನಿಯಾಗಿವೆ. ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ಅಕ್ಕಯ್ಯಮ್ಮ ಮೃತ ವೃದ್ಧೆ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಲಿಂಡರ್ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




