Belagavi NewsBelgaum NewsKannada NewsKarnataka NewsPolitics
*ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ನಡೆಯಬೇಕಿರುವ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಸ್ವತಃ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾಹಿತಿ ನೀಡಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ದಿನಾಂಕಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಯೊಂದಿಗೆ ಚಳಿಗಾಲದ ಅಧಿವೇಶನದ ಬಗ್ಗೆ ಮಾತನಾಡಿದ್ದು ಒಪ್ಪಿಗೆ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸಿದ್ಧತೆ ಮಾಡಿಕೊಳ್ಳಲಾಗುವುದು.
ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾಗಲೆಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗುತ್ತದೆ. ಈ ಬಾರಿಯಾದರೂ ಉತ್ತರ ಕರ್ನಾಟಕ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಿ ಎಂದು ಹೇಳಿದ್ದಾರೆ.




