Kannada NewsKarnataka NewsLatestPolitics

*ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ದ್ವೇಷ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಪುತ್ತೂರಿನ ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಧಾರ್ಮಿಕ ದ್ವೇಷ ಹಾಗೂ ಮಹಿಳೆಯ ಗೌರವಕ್ಕೆ ಧಕ್ಕೆ ತರುವಂತಹ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಿ ಪದ್ಮಂಜು ಎಂಬುವವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ನಿಟ್ಟಿನಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಎನ್ ಎಸ್ ಕಾಯ್ದೆ 79, 196, 290, 302 ಹಾಗೂ 3(5) ಕಲಂ ಅಡಿ ಕೇಸ್ ದಾಖಲಾಗಿದೆ.


Home add -Advt

Related Articles

Back to top button