
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ಅದರಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಉರಗನದೊಡ್ಡಿ ಬಳಿ ಈ ಘಟನೆ ನಡೆದಿದೆ. ಕೇಬಲ್ ಡ್ರಿಲ್ಲಿಂಗ್ ಮಿಷನ್ ತುಂಬಿದ್ದ ಕಂಟೈನರ್ ಇಳಿಜಾರಿನ ತಿರುವಿನಲ್ಲಿ ಉರುಳಿ ಬಿದ್ದಿದೆ. ಅತಿವೇಗವೇ ದುರಂತಕ್ಕೆ ಕಾರಣ ಎನ್ನಲಾಗಿದೆ.
ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




