Kannada NewsLatestNational
*ಮೊಂಥಾ ಚಂಡಮಾರುತ: ಬಿರುಗಾಳಿ ಸಹಿತ ಭಾರಿ ಮಳೆ: 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ ಜೋರಾಗಿದೆ. ನಾಳೆ ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 110 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಒಡಿಶಾ, ತಮಿಳುನಾಡು, ಆಂದ್ರಪ್ರದೇಶ, ಪಾಂಡಿಚೆರಿ, ಕರ್ನಾಟಕ, ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಮಚಲಿಪಟ್ಟಣಂ, ಕಳಿಂಗಪಟ್ಟಣ ನಡುವೆ ಭೂಕುಸಿತ ಸಾಧ್ಯತೆ ಇದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ.
ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಒಟ್ಟು ೨೩ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಾಲಾಗಿದೆ. ಕರ್ನಾಟಕದಲ್ಲಿಯೂ ಮೊಂಥಾ ಚಂಡಮಾರುತದ ಪರಿಣಾಮ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ, ಬೆಂಗಳುರು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಅಬ್ಬರವಿರಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.




