Belagavi NewsBelgaum NewsKannada NewsKarnataka NewsPolitics

*ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ : ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚುನಾವಣೆ ಸಂದರ್ಭದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ  ಮತ್ತು ಸ್ವೀಪ್ ಚಟುವಟಿಕೆ ಬಹುಮುಖ್ಯವಾಗಿದ್ದು, ಸ್ವೀಪ್ ಚಟುವಟಿಕೆಗಳ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವಂತೆ  ಅಧಿಕಾರಿಗಳಿಗೆ ರಾಜ್ಯ  ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎಸ್. ವಸ್ತ್ರದ ಅವರು ನಿರ್ದೇಶನ ನೀಡಿದರು. 

ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ (ಅಕ್ಟೋಬರ್-27) ರಂದು ಜರುಗಿದ ವಿಶೇಷ ಸಮಗ್ರ ಪರಿಷ್ಕರಣೆ ಸಿದ್ದತೆ, ಎಸ್.ಐ.ಆರ್/ಎಸ್.ಎಸ್.ಆರ್ ಗಳ ಸಿದ್ದತೆ ಹಾಗೂ ಸ್ವೀಪ್/ಇ.ಎಲ್.ಸಿ ಸಂಬಂಧಿತ ಕಾರ್ಯಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಿ.ಎಸ್. ವಸ್ತ್ರದ ಅವರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಎಂದರೇನು.? ಯಾಕೆ ಮತದಾರರ ಪಟ್ಟಿ ಪರಿಷ್ಕರಣೆ ಅವಶ್ಯಕ ಎಂಬುದರ ಕುರಿತು ಸಭೆಯಲ್ಲಿ ಎಲ್ಲ ಅಧಿಕಾರಿಗಳಿಗೆ ಮಾಹಿತಿ ನೀಡಿದರು.  ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಎಲ್ಲ ಹಂತದಲ್ಲಿ ಜನ ಸಾಮಾನ್ಯರಿಗೆ ಮಾಹಿತಿ ತಿಳಿಯಲು ಬ್ಯಾನರ್, ಕರ ಪತ್ರ ಹೀಗೆ ವಿವಿಧ ಚಟುವಟಿಕೆಗಳ ಮೂಲಕ ಜನರಿಗೆ ತಲುಪುವಂತೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.  

ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿ.ಪಂ. ಸಿ.ಇ.ಒ ರಾಹುಲ್ ಶಿಂಧೆ ರವರು ಜಿಲ್ಲೆಯ ಸ್ವೀಪ್ ಮತ್ತು ಇಎಲ್ಸಿ ಗಳ ಶಾಲಾ ಕಾಲೆಜುಗಳ ಮಾಹಿತಿಯನ್ನು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯವರಿಗೆ ಮಾಹಿತಿ ನೀಡಿದರು.  

Home add -Advt

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಯಾದ ವಿಜಯಕುಮಾರ ಹೊನಕೇರಿ, ಜಿ.ಪಂ. ಯೋಜನಾ ನಿರ್ದೇಶಕರಾದ ರವಿ ಎನ್ ಬಂಗಾರೆಪ್ಪನವರ, ಮಾಹಾನಗರ ಪಾಲಿಕೆ ಉಪ ಆಯುಕ್ತರಾದ ರೇಶ್ಮಾ ತಾಳಿಕೋಟಿ ಹಾಗೂ ಉದಯಕುಮಾರ ಬಿ,ಟಿ, ಡಿಡಿ.ಪಿಯು ಎಮ್ ಎಮ್ ಕಾಂಬಳೆ, ಜಿಲ್ಲಾ ಪಿ.ಯು ನೋಡಲ್ ಅಧಿಕಾರಿ ಎಮ್.ಎ.ಮುಲ್ಲಾ, ಡಿ.ಡಿ.ಪಿ.ಐ ಲೀಲಾವತಿ ಹಿರೇಮಠ, ಡಿ.ಎಚ್.ಒ ಡಾ: ಐ.ಪಿ.ಗಡಾದ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಜಿ.ಪಂ. ಸಿಬ್ಬಂದಿಗಳು ಹಾಜರಿದ್ದರು.

Related Articles

Back to top button