Kannada NewsKarnataka NewsLatest

*BREAKING: ಆರ್.ಎಸ್.ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಪಥಸಂಚಲನಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಆರ್.ಎಸ್.ಎಸ್ ಸಂಘಟನೆಗೆ ನೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಘವು ಪಥಸಂಚಲನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆರ್.ಎಸ್.ಎಸ್ ಆಗಲಿ ಯಾವುದೇ ಸಂಘ-ಸಂಸ್ಥೆಗಳಾಗಲಿ ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ, ಉದ್ಯಾನವನ, ಮೈದಾನಗಳಲ್ಲಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಈ ಮೂಲಕ ಆರ್.ಎಸ್.ಎಸ್ ನಿರ್ಬಂಧಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂಬ ಆಕ್ಷೇಪ ವ್ಯಕ್ತವಾಗಿತ್ತು.

ಸರ್ಕಾರದ ಆದೇಶದ ಬೆನ್ನಲ್ಲೇ ಕಲಬುರಗಿ ಚಿತ್ತಾಪುರ ಸೇರಿದಂತೆ ವಿವಿಧೆಡೆ ಆರ್.ಎಸ್.ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಆರ್.ಎಸ್.ಎಸ್ ಸದಸ್ಯರೊಬ್ಬರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

Home add -Advt

Related Articles

Back to top button