Belagavi NewsBelgaum NewsKannada NewsKarnataka NewsLatest
*ಈ ಬಾರಿ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ರಾಜ್ಯೋತ್ಸವವನ್ನು ಈ ಬಾರಿ ವಿಭಿನ್ನ ಹಾಗೂ ವಿಶೇಶವಾಗಿ ಆಚರಿಸಲು ಬೆಳಗಾವಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ.
ರಾಜ್ಯೋತ್ಸವದ ದಿನದಂದು ಬೆಳಗಾವಿಯ ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನವನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪುಷ್ಪಗೌರವ ಸಲ್ಲಿಸಿ, ಅಲ್ಲಿಂದ ಮೆರವಣಿಗೆ ಹೊರಡಿಸಲು ನಿರ್ಧರಿಸಿದೆ.
ಈ ಮೆರವಣಿಗೆಯು ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನವನದಿಂದ ಆರಂಭವಾಗಿ, ಶನಿ ಮಂದಿರ, ನ್ಯುಕ್ಲಿಯಸ್ ಮಾಲ್ ಮಾರ್ಗವಾಗಿ ಚನ್ನಮ್ಮ ವೃತ್ತವನ್ನು ಸೇರಲಿದೆ. ಈ ವಿಶೇಷ ಮೆರವಣಿಗೆಗೆ ಅನುಮತಿ ನೀಡುವಂತೆ ಹಾಗೂ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ಕರವೇ ಅಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದ ಕಾರ್ಯಕರ್ತರು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.



