Belagavi NewsKannada NewsNational

*ಕನ್ನೇರಿ ಶ್ರೀಗಳ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅವಾಚ್ಯ ಶಬ್ದ ಬಳಕೆ ಮಾಡಿದ್ದಕ್ಕಾಗಿ ಮಹಾರಾಷ್ಟ್ರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ನಿರ್ಬಂಧ ವಿಧಿಸಲಾಗಿದ್ದನ್ನು ಪ್ರಶ್ನಿಸಿ ಶ್ರೀಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಚೋದನಕಾರಿ ಹಾಗೂ ಕೀಳುಮಟ್ಟದ ಹೇಳಿಕೆಗಳನ್ನು ನೀಡಿದ್ದ ಸ್ವಾಮೀಜಿ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಪ್ರಸನ್ನ ವರಾಲೆ ಅವರ ಪೀಠವು ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಹೈಕೋರ್ಟ್ ಆದೇಶದಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ ನ್ಯಾಯಪೀಠ, ನೀವು ಸ್ವಾಮೀಜಿಯಾಗಿ ಗಂಭೀರವಾಗಿ ವರ್ತಿಸಬೇಕು. ಅವಹೇಳನಕಾರಿ ಭಾಷೆ ಬಳಸುವುದು ವಾಕ್ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ. ನೀವು ಮಾತನಾಡುವುದನ್ನು ನಿಲ್ಲಿಸಿ, ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ ಎಂದು ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಸಲಹೆ ನೀಡಿದೆ.

Home add -Advt

Related Articles

Back to top button