
ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಒಂದೂವರೆ ವರ್ಷದ ಹಿಂದೆ ನಡೆದಿರುವ ಘಟನೆಯ ದೃಶ್ಯ ಈಗ ವೈರಲ್ ಆಗುತ್ತಿದೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ಗೋಣಿಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಆಸ್ತಿ ವಿಚಾರವಾಗಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗುರುಮೂರ್ತಿ ಎಂಬುವವರ ಪತ್ನಿ ಮೇಲೆ ಮಹಿಳೆಯರು ಮನಬಂದಂತೆ ಹಲ್ಲೆ ನಡೆಸಿದ್ದಾರೆ.
ವಿಕಲಾಂಗ ಪತಿ ಗುರುಮೂರ್ತಿ ಎದುರಲ್ಲೇ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಬಗ್ಗೆ ದೂರು ನೀಡಲು ಹೋದರೆ ಚನ್ನಗಿರಿ ಪೊಲೀಸರು ಈವರೆಗೂ ದೂರು ಸ್ವೀಕರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.




